ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ನಿಯೋಗ ಸೋಮವಾರ ಭೇಟಿ ಮಾಡಿದ್ದು, ಈ ವೇಳೆ ರಾಜ್ಯದ ನೀರಾವರಿ ಯೋಜನೆಗಳ ಕುರಿತು ತ್ವರಿತಗತಿಯ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಮತ್ತು ಶಾಸಕರ ಜತೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ ಎಚ್.ಡಿ. ಕುಮಾರಸ್ವಾಮಿಯವರು ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು. ಎತ್ತಿನಹೊಳೆ ಯೋಜನೆಯ ಅನುಷ್ಠಾನ,