ಗದಗ : ಚುನಾವಣೆ ಮುನ್ನವೇ ಜಿಲ್ಲೆಯ ಚೆಕ್ಪೋಸ್ಟ್ಗಳಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ, ತಂಬಾಕು ಸೇರಿದಂತೆ ಅನೇಕ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ನಗರದ ಮುಳಗುಂದ ರಸ್ತೆಯಲ್ಲಿನ ಚೆಕ್ಪೋಸ್ಟ್ ತಪಾಸಣೆ ವೇಳೆ 15 ಲಕ್ಷ ರೂ. ಹಣ ಸಿಕ್ಕಿದೆ. ಹಾವೇರಿ ಜಿಲ್ಲೆ ಹುಲಗೂರನಿಂದ ಗದಗ ಮಾರ್ಗವಾಗಿ ದೇವದುರ್ಗಕ್ಕೆ ಹೊರಟಿದ್ದ ಕಾರಿನಲ್ಲಿ ದಾಖಲೆ ಇಲ್ಲದೇ ತೆಗೆದುಕೊಂಡು ಹೊರಟಿದ್ದ ಹಣ ವಶಕ್ಕೆ ಪಡೆದುಕೊಂಡಿದ್ದಾರೆ.ಮುಂಡರಗಿ ಚೆಕ್ಪೋಸ್ಟ್ನಲ್ಲಿ ತಂಬಾಕು ಸೀಜ್ ಮಾಡಲಾಗಿದೆ.