ಮಲೆನಾಡು ಭಾಗದಲ್ಲಿ ಹಿಂಡು ಹಿಂಡಾಗಿ ಗಜಪಡೆ ಓಡಾಡುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ದೊಡ್ಡ ದೊಡ್ಡ ಆನೆಗಳ ಜೊತೆಯಲ್ಲಿ ಮರಿಗಳೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಆನೆ ಸಂತತಿ ದಿನದಿಂದ ದಿನಕ್ಕೆ ವೃದ್ಧಿಸುತ್ತಿರುವುದು ಕಂಡು ಬಂದಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಕೀರಿಹಳ್ಳಿ ಗ್ರಾಮದ ಕಾಫಿ ತೋಟದಲ್ಲಿ ಹತ್ತಾರು ಆನೆ ಬೀಡುಬಿಟ್ಟಿವೆ. ಕಾಫಿ ತೋಟದಲ್ಲೆಲ್ಲಾ ಓಡಾಡಿ ದಾಂಧಲೆ ನಡೆಸಿ ಅಪಾರ ಪ್ರಮಾಣದ ಬೆಳೆ ನಾಶ ಮಾಡಿವೆ. ಈ ನಡುವೆ ಬಿಸಿಲ ಬೇಗೆಯಿಂದ ಕಾಫಿ ತೋಟದಲ್ಲಿರುವ