ಬೆಂಗಳೂರು : ಊಟ ಖಾಲಿ ಆಗಿದೆ ಎಂದು ಹೇಳಿದ್ದಕ್ಕೆ ಹೊಟೆಲ್ ಮಾಲೀಕನಿಗೆ ಚಾಕುವಿನಿಂದ ಇರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಆರೋಪಿಯನ್ನು ರೌಡಿಶೀಟರ್ ಯಲ್ಲಪ್ಪ ಎಂದು ಗುರುತಿಸಲಾಗಿದೆ. ಹೋಟೆಲ್ ಮಾಲೀಕ ಚಂದ್ರಶೇಖರ್ ಚಾಕು ಇರಿತಕ್ಕೆ ಒಳಗಾದವರು. ಗಾಯಾಳು ಪ್ರಸ್ತುತ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾತ್ರಿ 10 ಗಂಟೆಯ ನಂತರ ಮದ್ಯದ ಬಾಟಲಿ ಹಿಡಿದು ಸಿಗರೇಟು ಸೇದುತ್ತಾ ಬಂದಿದ್ದ ಯಲ್ಲಪ್ಪ, ಊಟ ಖಾಲಿ ಆಗಿದೆ ಎಂದಿದ್ದಕ್ಕೆ