ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತರೂರು ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಕಾರಿನಲ್ಲಿ ತೆರಳುತ್ತಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. 28 ವರ್ಷದ ಅವಿನಾಶ್, 5 ವರ್ಷದ ಪ್ರಣಂತಿ, 3 ವರ್ಷದ ಸೌಖ್ಯಾ ಮೃತ ದುರ್ದೈವಿಗಳಾಗಿದ್ದಾರೆ. ಮುಂದೆ ಚಲಿಸುತ್ತಿದ್ದ ಲಾರಿಗೆ ಸ್ವಿಫ್ಟ್ ಕಾರು ಡಿಕ್ಕಿಯಾಗಿದೆ. ಲಾರಿಗೆ ಸ್ವಿಫ್ಟ್ ಕಾರು ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಘಟನೆಯಲ್ಲಿ