ಪ್ರತಿದಿನ ಕುಡಿದು ಬಂದು ಹೆಂಡತಿ ಜೊತೆ ಕಿರಿಕ್ ಮಾಡುತ್ತಿದ್ದ ವ್ಯಕ್ತಿಯೊಬ್ಬ ಜನನಿಬಿಡ ಪ್ರದೇಶದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚನ್ನಪಟ್ಟಣ ಮೂಲದ ಮಾದೇವ ಮೃತ ವ್ಯಕ್ತಿ. ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು ಸ್ಥಳೀಯರು ಶವ ನೋಡಿ ಬೆಚ್ಚಿಬಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮೃತ ಮಾದೇವ ಪ್ರತಿದಿನ ಕುಡಿದು ಹೆಂಡತಿ ಜೊತೆ ಜಗಳವಾಡಿ ಹಿಂಸೆ ನೀಡುತ್ತಿದ್ದ. ಈತನ ವರ್ತನೆಯಿಂದ ನೊಂದಿದ್ದ