ಮಂಡ್ಯ : ದಿನೇ ದಿನೇ ಕಾವೇರಿ ಕಿಚ್ಚು ಹೆಚ್ಚಾಗುತ್ತಿದ್ದು, ಮಂಡ್ಯದಲ್ಲಿ ಅನ್ನದಾತರು ಹಾಗೂ ರೈತ ಸಂಘಟನೆಗಳಿಂದ ನಿರಂತರ ಹೋರಾಟ ನಡೆಯುತ್ತಿದೆ. ಇಂದು ಕಾವೇರಿ ಹೋರಾಟದ ಕಿಚ್ಚನ್ನು ಹೆಚ್ಚಿಸುವ ಸಲುವಾಗಿ ಜೆಡಿಎಸ್ ದಳಪತಿಗಳು ಅಖಾಡಕ್ಕಿಳಿಯಲಿದ್ದಾರೆ. ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಶನಿವಾರ ಮಂಡ್ಯದಲ್ಲಿ ದಳ ಪಡೆಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ. ಮಂಡ್ಯ ಜೆಡಿಎಸ್ ನಾಯಕರು ರಾಜ್ಯ ಸರ್ಕಾರಕ್ಕೆ ಎರಡು ದಿನಗಳ ಡೆಡ್ಲೈನ್ ನೀಡಿದ್ದು, ಕೆಆರ್ಎಸ್ ಡ್ಯಾಂನಿಂದ ತಮಿಳುನಾಡಿಗೆ ಹರಿಸುತ್ತಿದ್ದ ನೀರು ನಿಲ್ಲಿಸುವಂತೆ