ಸಂಜೆಯ ಹೊತ್ತಿನಲ್ಲಿ ಸುವಾಸನೆಯ ಸುಗಂಧ ಬೀರುತ್ತ, ಮುಖ್ಯವಾಗಿ ಹೂಮಾಲೆಗಳಿಗೆ ಅತ್ಯಾವಶ್ಯಕವಾಗಿ ಬೇಕಾಗಿರುವ ಹೂವು ಸುಗಮಧರಾಜ. ಈ ಹೂವಿಗೆ ಎಲ್ಲೆಡೆ ವ್ಯಾಪಕ ಬೇಡಿಕೆ ಇದೆ. ಸುಗಂಧರಾಜ ಹೂವಿನ ಬೆಳೆ ಸಾಮಾನ್ಯವಾಗಿ ಚಿತ್ರದುರ್ಗ, ದಾವಣಗೆರೆ, ತುಮಕೂರು ಹೀಗೆ ದಕ್ಷಿಣಕರ್ನಾಟಕದ ಜಿಲ್ಲೆಗಳಲ್ಲಿ ಬೆಳೆಯುವುದು ಹೆಚ್ಚು. ಆದರೆ, ರೈತ ದಾವಲ್ಸಾಬ್, ಕೊಪ್ಪಳ ಜಿಲ್ಲೆಯಂತಹ ಬಿಸಿಲಿನ ನಾಡಿನಲ್ಲಿಯೂ ಈ ಹೂವನ್ನು ಬೆಳೆದು, ಯಶಸ್ವಿಯಾಗಬಹುದು ಎಂಬುದನ್ನು ಸಾಬೀತುಪಡಿಸಿದ್ದಾರೆ. ಜಿಲ್ಲೆ ಮಾತ್ರವಲ್ಲ, ಇಡೀ ರಾಜ್ಯ ಈ ವರ್ಷ ಬರದ