ಬೆಂಗಳೂರು : ಯಾವ ಧರ್ಮದಲ್ಲಿ ಸಾಮಾಜಿಕ ಸಮಾನತೆ, ಆರ್ಥಿಕ ಸಮಾನತೆ ಇಲ್ಲವೋ, ಯಾವ ಧರ್ಮದಲ್ಲಿ ಮನುಷ್ಯರ ನಡುವೆ ಭೇದ-ಭಾವ ಇರುತ್ತದೆಯೋ ಅದು ಧರ್ಮವೇ ಅಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಟೆಕ್ ಸಮ್ಮಿಟ್-2023ರ ಹಿನ್ನೆಲೆಯಲ್ಲಿ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇದೇ ವೇಳೆ ಉದಯನಿಧಿ ಸ್ಟಾಲಿನ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ್ದಾರೆ. ಉದಯನಿಧಿ ಸ್ಟಾಲಿನ್ ಯಾವ ಸಂದರ್ಭದಲ್ಲಿ ಆ ಹೇಳಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ. ಯಾವ