ಚೀನಾ, ಜಪಾನ್, ಕೊರಿಯಾ, ಅಮೆರಿಕ, ಬ್ರೆಜಿಲ್ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳ ಹಿನ್ನೆಲೆ ಬೆಂಗಳೂರಿನಲ್ಲೂ ಕೊರೊನಾ ಆತಂಕ ಹೆಚ್ಚಾಗಿದೆ. ಹೀಗಾಗಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮುಂದಾಗಿದ್ದು ಈ ಬಗ್ಗೆ ಇಂದು ಸಭೆ ನಡೆಸಿ ಚರ್ಚಿಸಲಿದ್ದಾರೆ. ಮತ್ತೊಂದೆಡೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಆತಂಕ ಮನೆ ಮಾಡಿದ್ದು, ಮುಂಬರುವ ಕ್ರಿಸ್ಮಸ್, ಹೊಸವರ್ಷಾಚರಣೆಗೆ ಕೊರೊನಾ ಅಡ್ಡಿಪಡಿಸಬಹುದಾ ಎಂಬ ಗೊಂದಲ ಉಂಟಾಗಿದೆ. ಸದ್ಯ ರಾಜ್ಯದಲ್ಲಿ ಮತ್ತೆ ಕೋವಿಡ್