ಉತ್ತರ ಕರ್ನಾಟಕದ ಪ್ರತ್ಯೇಕ ಕೂಗೂ ಅಸಂಬದ್ಧ. ಈ ಭಾಗದ ಸಚಿವರು, ಶಾಸಕರು, ಸಂಸದರು ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಮೊದಲು ಚರ್ಚೆಮಾಡಬೇಕಿದೆ. ಈ ಭಾಗ ಅಭಿವೃದ್ಧಿಯಾಗಬೇಕಿದೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಶಾಲಾ ಶಿಕ್ಷಕರ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಭಾಪತಿ ಬಸವರಾಜ ಹೊರಟ್ಟಿ, ಮೊದಲು ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಈ ಭಾಗದ ಜನಪ್ರತಿನಿಧಿಗಳು ಸೇರಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರ ಜೊತೆ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.