ಹುಬ್ಬಳ್ಳಿಯ ಕಲಘಟಗಿಯಲ್ಲಿ ಹಸೆಮಣೆ ಏರಬೇಕಿದ್ದ ನಿಂಗಪ್ಪ ನವಲೂರ ಎನ್ನುವ ಯುವಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಜೂನ್ 7ರಂದು ಮದುವೆಯಾಗಬೇಕಿದ್ದ ಯುವಕನ ಹತ್ಯೆ ಪ್ರಕರಣವನ್ನು ಕಲಘಟಗಿ ಪೊಲೀಸರು ಘಟನೆ ನಡೆದ 48 ಗಂಟೆಗಳಲ್ಲಿ ಭೇದಿಸಿದ್ದಾರೆ. ವಿವಾಹಿತೆ ಜೊತೆಗಿನ ಅನೈತಿಕ ಸಂಬಂಧವೇ ಕೊಲೆಗೆ ಕಾರಣ ಎಂದು ಪೊಲೀಸ್ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಗಪ್ಪ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಪತಿ ಹಾಗೂ ಆತನ ಸಹೋದರನನ್ನು ಪೊಲೀಸರು ಬಂಧಿಸುವಲ್ಲಿ