ಬೆಳಗಾವಿ : ಸರಕು ಸಾಗಣೆ ಮಾಡುತ್ತಿದ್ದ ಲಾರಿ ಹರಿದು 10 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದ್ದು, ರೊಚ್ಚಿಗೆದ್ದ ಜನರು ಕಲ್ಲು ತೂರಾಟ ನಡೆಸಿದ್ದಾರೆ. ಬೆಳಗಾವಿ ಕ್ಯಾಂಪ್ ಪ್ರದೇಶದ ವೆಲ್ಕಮ್ ಹೋಟೆಲ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.ಇದರಿಂದ ರೊಚ್ಚಿಗೆದ್ದ ಜನ ಪೊಲೀಸರ ಎದುರೇ ಲಾರಿ ಮೇಲೆ ಕಲ್ಲು ತೂರಾಟ ನಡೆಸಿದ್ದು, ಲಾರಿ ಜಖಂಗೊಂಡಿದೆ. ಸದ್ಯ