ಮೈಸೂರು : ಮೈಸೂರಿನ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಕುತ್ತಿಗೆಗೆ ಯುವಕನೊಬ್ಬ ಚಾಕುವಿನಿಂದ ಇರಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಶಾಸಕ ತನ್ವೀರ್ ಸೇಠ್ ಬನ್ನಿಮಂಟಪದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವೇಳೆ ಫರಾನ್ ಎಂಬಾತ ಶಾಸಕರು ಕುಳಿತಲ್ಲಿಗೆ ಬಂದು ಚಾಕುವಿನಿಂದ ಅವರ ಕುತ್ತಿಗೆ ಭಾಗಕ್ಕೆ ಇರಿದು ಪರಾರಿಯಾಗಲು ಪ್ರಯತ್ನಿಸಿದ್ದಾನೆ. ಆಗ ಅಲ್ಲಿದ್ದವರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡ ಶಾಸಕ ತನ್ವೀರ್ ಸೇಠ್ ಅವರನ್ನು