ಪ್ರೀತಿ ನಿರಾಕರಿಸಿದ್ದ ಯುವತಿಯನ್ನು ಹಾಡಹಗಲೇ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಾವಣಗೆರೆಯಲ್ಲಿ ನಿನ್ನೆ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಗುರುವಾರ ಬೆಣ್ಣೆ ನಗರಿ ದಾವಣಗೆರೆಯಲ್ಲಿ ನಡೆದಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಯುವಕನೂ ಮೃತಪಟ್ಟಿದ್ದಾನೆ. ಯುವತಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ ಸಾದತ್ ಅಲಿಯಾಸ್ ಚಂದ್ ಪೀರ್ ಎಂದು ಗುರುತಿಸಲಾಗಿದೆ. ಗುರುವಾರ ದಾವಣಗೆರೆ