ರಾಜಕಾಲುವೆ ಒತ್ತುವರಿಗೆ ಸಂಬಂಧಿಸಿ ಅಹವಾಲು ಸಲ್ಲಿಸಲು ಯತ್ನಿಸಿದ ಮಹಿಳೆಯನ್ನು ನಿಂದಿಸಿದ್ದಲ್ಲದೇ, ಆಕೆಯನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಿದ್ದಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಅರವಿಂದ್ ಲಿಂಬಾವಳಿ ವಿರುದ್ಧ ಆಮ್ ಆದ್ಮಿ ಪಾರ್ಟಿಯು ಮಹಿಳಾ ಆಯೋಗಕ್ಕೆ ದೂರು ನೀಡಿತು. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಅರವಿಂದ್ ಲಿಂಬಾವಳಿಯವರ ದರ್ಪ ಮಿತಿಮೀರಿದೆ. ರಾಜಕಾಲುವೆ ಒತ್ತುವರಿ ಸಂಬಂಧ ದೂರು ನೀಡಲು ಆಗಮಿಸಿದ ಮಹಿಳೆಯನ್ನು ಲಿಂಬಾವಳಿ ನಿಂದಿಸಿದ್ದಾರೆ. ಅಧಿಕಾರ ದುರ್ಬಳಕೆ ಮಾಡಿಕೊಂಡು ಪೊಲೀಸರ