ಗುತ್ತಿಗೆದಾರ ಸಂತೋಷ್ ಪಾಟೀಲ್ ಸಾವಿಗೆ ಸಂಬಂಧಿಸಿ ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಆಮ್ ಆದ್ಮಿ ಪಾರ್ಟಿಯ ನೂರಾರು ಕಾರ್ಯಕರ್ತರು ಬೆಂಗಳೂರಿನ ಶಿವಾನಂದ ವೃತ್ತದಿಂದ ಬೃಹತ್ ಮೆರವಣಿಗೆ ನಡೆಸಿದರು. ಪ್ರತಿಭಟನಾನಿರತ ಎಎಪಿ ಮುಖಂಡರು ಹಾಗೂ ಕಾರ್ಯಕರ್ತರು ಸಚಿವ ಈಶ್ವರಪ್ಪ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕುಮಾರಕೃಪಾದಲ್ಲಿರುವ ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಸಾಗುತ್ತಿದ್ದ ಎಎಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಪೊಲೀಸರು ಮಾರ್ಗಮಧ್ಯದಲ್ಲೇ ಬಂಧಿಸಿ, ಹೈಗ್ರೌಂಡ್ಸ್ ಠಾಣೆಗೆ