ಲಂಚ ಪಡೆದ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಂಗಳೂರು ಜಿಲ್ಲಾಧಿಕಾರಿ ಜೆ.ಮಂಜುನಾಥ್ರವರನ್ನು ಅಮಾನತು ಮಾಡಿ, ಶೀಘ್ರವೇ ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಆಗ್ರಹಿಸಿದೆ. ಪ್ರೆಸ್ಕ್ಲಬ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಎಪಿ ರಾಜ್ಯ ವಕ್ತಾರ ಹಾಗೂ ಮಾಜಿ ಕೆಎಎಸ್ ಅಧಿಕಾರಿ ಕೆ.ಮಥಾಯಿ, ಆನೇಕಲ್ ತಾಲೂಕಿನ ಕೂಡ್ಲು ಗ್ರಾಮದ 38 ಗುಂಟೆ ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿ ಅರ್ಜಿದಾರರ ಪರ ತೀರ್ಪು ನೀಡಲು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು 15 ಲಕ್ಷ ರೂಪಾಯಿಗೆ