ವಾರ್ಡ್ ಪುನರ್ ವಿಂಗಡನೆಯನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ, ಎಂಟು ವಾರಗಳೊಳಗೆ ಬಿಬಿಎಂಪಿ ಚುನಾವಣೆಗೆ ಅಧಿಸೂಚನೆ ಹೊರಡಿಸಬೇಕೆಂಬ ಸುಪ್ರೀಂ ಕೋರ್ಟ್ ಆದೇಶವನ್ನು ಆಮ್ ಆದ್ಮಿ ಪಾರ್ಟಿ ಸ್ವಾಗತಿಸಿದ್ದು, ಅಭೂತಪೂರ್ವ ಬಹುಮತದೊಂದಿಗೆ ಪಕ್ಷವು ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ. ಸುಪ್ರೀಂ ಕೋರ್ಟ್ ತೀರ್ಪು ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, 2020ರಲ್ಲೇ ನಡೆಯಬೇಕಿದ್ದ ಬಿಬಿಎಂಪಿ ಚುನಾವಣೆಯು ನಾನಾ ಕಾರಣಗಳಿಗೆ ಮುಂದೂಡಲ್ಪಟ್ಟಿತ್ತು. ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಆಡಳಿತಾರೂಢ ಬಿಜೆಪಿ ಕೂಡ ಚುನಾವಣೆಯನ್ನು