ಸಾಂಸ್ಕೃತಿಕ ನಗರಿ ಮೈಸೂರಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಜಂಬೂಸವಾರಿ ಮೆರವಣಿಗೆಗೆ 1 ತಿಂಗಳು ಬಾಕಿ ಇದೆ. ಗಜಪಡೆ ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಮ್ ಈಗಾಗಲೇ ವಿಜಯದಶಮಿ ಮೆರವಣಿಗೆಗೆ ಸಕಲ ರೀತಿಯಲ್ಲೂ ಸಜ್ಜಾಗುತ್ತಿದ್ದು, ಮರದ ಅಂಬಾರಿ ಹೊತ್ತು ಸಾಗುವ ತಾಲೀಮಿಗೆ ಸೋಮವಾರ ಚಾಲನೆ ದೊರೆತಿದೆ. ಚಿನ್ನದ ಅಂಬಾರಿ ಹೊತ್ತು ಅಭಿಮನ್ಯು ವಿಜಯದಶಮಿ ಮೆರವಣಿಗೆಯಲ್ಲಿ ಸಾಗಬೇಕಿದೆ. ಹೀಗಾಗಿ ಆನೆಗೆ ತಾಲೀಮು ಮಾಡಿಸಿ ಅಣಿಗೊಳಿಸಲಾಗುತ್ತಿದೆ. ದಸರಾ ಗಜಪಡೆಯ ತಾಲೀಮು ಸೋಮವಾರದಿಂದ ಮತ್ತಷ್ಟು ಚುರುಕು