ಚಿಕ್ಕಮಗಳೂರು : ನಮಗೆ ಪರೀಕ್ಷೆ-ಹಿಜಬ್ ಎರಡೂ ಬೇಕು ಎಂದು ಹಿಜಬ್ ಧರಿಸಿದ ವಿದ್ಯಾರ್ಥಿನಿಯರು ಕಾಲೇಜಿನ ಗೇಟ್ ಮುಂದೆಯೇ ಪ್ರತಿಭಟನೆ ನಡೆಸಿದ ಘಟನೆ ನಗರದ ಐಡಿಎಸ್ಜಿ ಕಾಲೇಜಿನಲ್ಲಿ ನಡೆದಿದೆ. ನಗರದ ಐಡಿಎಸ್ಜಿ ಪದವಿ ಕಾಲೇಜಿಗೆ ಇಂದು ಸುಮಾರು 25ಕ್ಕೂ ಹೆಚ್ಚು ವಿಧ್ಯಾರ್ಥಿನಿಯರು ಹಿಜಬ್ ಧರಿಸಿ ಬಂದಿದ್ದರು. ಈ ವೇಳೆ ಕಾಲೇಜು ಆಡಳಿತ ಮಂಡಳಿ ಹಿಜಬ್ ಧರಿಸಿ ಬಂದರೆ ಕಾಲೇಜಿಗೆ ಪ್ರವೇಶವಿಲ್ಲ ಎಂದು ಗೇಟ್ ಮುಚ್ಚಿದ್ದರು. ಹೀಗಾಗಿ ವಿದ್ಯಾರ್ಥಿನಿಯರು ಕಾಲೇಜಿನ ಗೇಟ್