ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ ಪ್ರಕರಣವನ್ನು ಖಂಡಿಸಿರುವ ಎಬಿಪಿಪಿ ಕಾರ್ಯಕರ್ತರು ಅಸಹಕಾರ ಚಳುವಳಿ ಆರಂಭಿಸಿದ್ದಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇಶದ್ರೋಹದ ಘೋಷಣೆ ಕೂಗಿದವರನ್ನು ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಎಬಿವಿಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಪ್ರತಿಭಟನೆಯಲ್ಲಿ ಕೈಗೊಳ್ಳುವಂತೆ ವಿದ್ಯಾರ್ಥಿಗಳನ್ನು ಪ್ರೇರೆಪಿಸುತ್ತಿದ್ದ ಆರೋಪದ ಮೇಲೆ ಓರ್ವ ವಿದ್ಯಾರ್ಥಿಯನ್ನು