ಕಂದಾಯ ಇಲಾಖೆಯ ವತಿಯಿಂದ ತರೀಕೆರೆ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದ ವೇದಿಕೆಯ ಮೇಲೆ ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಡಾ. ರಾಜ್ ಕುಮಾರ್ ಅವರ ಹೊಸ ಬೆಳಕು ಮೂಡುತಿದೆ ಹಾಡನ್ನು ಹೇಳಿದ್ದು, ಉಪವಿಭಾಗಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಕಂದಾಯ ಇಲಾಖೆಯ ಅಧಿಕಾರಿಗಳು ಕುಣಿದು ಕುಪ್ಪಳಿಸಿದ್ದಾರೆ. ತರೀಕೆರೆ ಪಟ್ಟಣದಲ್ಲು ನಡೆದ ಸರ್ಕಾರಿ ನೌಕರರ ಕ್ರೀಡಾಕೂಟ ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧಿಕಾರಿಗಳು ಹಾಡು ಹೇಳಲು ಆರಂಭಿಸುತ್ತಿದ್ದಂತೆ ಚಿಕ್ಕಮಗಳೂರು ಉಪವಿಭಾಗಾಧಿಕಾರಿ ರಾಜೇಶ್, ತರೀಕೆರೆ ಉಪವಿಭಾಗಾಧಿಕಾರಿ ಸಿದ್ದಲಿಂಗಾರೆಡ್ಡಿ, ತರೀಕೆರೆ ತಹಶೀಲ್ದಾರ್