ಜಮೀನು ಭೂಸ್ವಾಧೀನ ಮಾಡಿಕೊಳ್ಳಲಾದ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶವನ್ನ ಉಲ್ಲಂಘಿಸಿದ ಕಾರಣ ಉಪವಿಭಾಗಾಧಿಕಾರಿಗಳ ಕಚೇರಿಯ ಪಿಠೋಪಕರಣಗಳನ್ನ ಜಪ್ತಿ ಮಾಡಿದ ಪ್ರಕರಣ ನಡೆದಿದೆ.ವಿಜಯಪುರ ನಗರದಲ್ಲಿ ಈ ಘಟನೆ ನಡೆದಿದೆ. ವಿಜಯಪುರ ಉಪವಿಭಾಗಾಧಿಕಾರಿಗಳ ಕಚೇರಿಯ ಪೀಠೋಪಕರಣಗಳನ್ನ ಜಪ್ತಿ ಮಾಡಲಾಗಿದೆ. ವಿಜಯಪುರ ನಗರದ ಹೊರವಲಯದ ವರ್ತುಲ ರಸ್ತೆ ನಿರ್ಮಾಣಕ್ಕಾಗಿ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು. ಇದರಲ್ಲಿ ಮಹಲ ಬಾಗಾಯತ ಕಂದಾಯ ಗ್ರಾಮ ವ್ಯಾಪ್ತಿಯ ಸರ್ವೇ ನಂಬರ್ 953 ಎಂಬ ಜಮೀನು ಭೂಸ್ವಾಧೀನಕ್ಕೊಳಪಟ್ಟಿತ್ತು. ಸ್ಥಳೀಯ ವಿಕ್ರಂ ಎನ್ನುವವರ ಮಾಲೀಕತ್ವದ