ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ 15ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿ ಭ್ರಷ್ಟ ಅಧಿಕಾರಿಗಳ ಅಕ್ರಮ ಆಸ್ತಿಪಾಸ್ತಿ ಪತ್ತೆ ಹಚ್ಚಿದ್ದಾರೆ. ರಾಜ್ಯದ ಮೈಸೂರು, ಬೆಂಗಳೂರು, ದಾವಣಗೆರೆ, ಚಿಕ್ಕಮಗಳೂರು, ಕಾರವಾರ ಸೇರಿದಂತೆ 15ಕ್ಕೂ ಹೆಚ್ಚು ಕಡೆಗಳಲ್ಲಿ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಸಹಕಾರ ಸಂಘಗಳ ನಿಬಂಧಕ ಸೇರಿ ಐವರು ಭ್ರಷ್ಟ ಅಧಿಕಾರಿಗಳನ್ನು ಬಲೆಗೆ ಕೆಡವಿದೆ. ಭ್ರಷ್ಟ ಅಧಿಕಾರಿಗಳು ಸಂಗ್ರಹಿಸಿಟ್ಟಿದ್ದ ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ-ಪಾಸ್ತಿ ಪತ್ತೆ ಹಚ್ಚಿದ್ದಾರೆ.ಸಹಕಾರ ಸಂಘಗಳ ನಿಬಂಧಕರ