ಶಿವರಾಮ್ ಕಾರಂತ ಬಡಾವಣೆ ಡಿನೋಟಿಫಿಕೇಶನ್ ಕುರಿತಂತೆ ಎಸಿಬಿ ಸಲ್ಲಿಸಿದ ಎಫ್ಐಆರ್ ರದ್ದುಗೊಳಿಸಬೇಕು ಎಂದು ಯಡಿಯೂರಪ್ಪ ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ. ಹೈಕೋರ್ಟ್ನ ಏಕಸದಸ್ಯ ಪೀಠ ಇಂದು ವಿಚಾರಣೆ ನಡೆಸಿತು. ಬಿಎಸ್ವೈ ವಿರುದ್ಧ ಸದ್ಯ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎನ್ನುವ ಎಸಿಬಿ ಪರ ವಕೀಲರ ಆಶ್ವಾಸನೆಯಿಂದಾಗಿ ಆಗಸ್ಟ್ 30 ರವರೆಗೆ ಮಧ್ಯಂತರ ಆದೇಶವನ್ನು ಕೋರ್ಟ್ ಮುಂದುವರಿಸಿದೆ ಎಂದು ಮೂಲಗಳು ತಿಳಿಸಿವೆ. ಮುಂಬರುವ ಆಗಸ್ಟ್ 30 ರಂದು ಬಿಜೆಪಿ