ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದಲ್ಲಿ (ಎಸಿಬಿ) 56 ಪ್ರಕರಣಗಳು ದಾಖಲಾಗಿದ್ದು, ಅಧಿಕಾರ ಬಳಸಿಕೊಂಡು ಯಾವುದೇ ತನಿಖೆ ನಡೆಸದಂತೆ ಸಿದ್ದರಾಮಯ್ಯ ನೋಡಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲ ಮಾತನಾಡಿದ ಅವರು, ನನ್ನ ವಿರುದ್ಧ 46 ಪ್ರಕರಣಗಳಿವೆ ಎನ್ನುತ್ತಿರುವ ಮುಖ್ಯಮಂತ್ರಿ ವಿರುದ್ಧವೇ 56 ಪ್ರಕರಣಗಳಿವೆ ಎಂದು ಹೇಳಿದ್ದಾರೆ. ಚುನಾವಣೆಯ ಸಮೀಕ್ಷೆಯಿಂದ ಕಂಗೆಟ್ಟಿರುವ ಸಿದ್ದರಾಮಯ್ಯ ರಾಜ್ಯದಲ್ಲಿ ಅಧಿಕಾರ ಕಳೆದುಕೊಳ್ಳುವ ಭೀತಿಯಿಂದ ಬಾಯಿಗೆ ಬಂದಂತೆ