ಲಂಚ ಪಡೆಯುತ್ತಿದ್ದ ಕೆಎಸ್ಸಾರ್ಟಿಸಿ ಟ್ರಾಫಿಕ್ ಕಂಟ್ರೋಲರ್ ಎಸಿಬಿ ಬಲೆಗೆ!

bengaluru| Geethanjali| Last Modified ಬುಧವಾರ, 21 ಜುಲೈ 2021 (14:14 IST)
ಮಂಗಳವಾರ ತಡರಾತ್ರಿ ಚಿಂತಾಮಣಿಯಲ್ಲಿ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೆಎಸ್ ಆರ್ ಟಿಸಿ ಟ್ರಾಫಿಕ್ ಕಂಟ್ರೋಲರ್ ವೆಂಕಟಾಚಲಪತಿಯನ್ನು ಬಲೆಗೆ ಕೆಡವಿದ್ದಾರೆ. ವೆಂಕಟಾಚಲಪತಿ ಸಂಬಂಧಿ ಹಾಗೂ ಮೇಲಾಧಿಕಾರಿಯಾಗಿದ್ದ ಡಿಸಿ ಚಂದ್ರಶೇಖರ್ ವರಿಗೆ ಲಂಚದ ಮೊತ್ತ ತಲುಪಿಸುತ್ತಿದ್ದರು.
ಕೋಲಾರ ಕೆಎಸ್ಆರ್ಟಿಸಿ ಡಿಸಿ ಚಂದ್ರಶೇಖರ್ ತಮ್ಮ ಸಂಬಂಧಿಯಾದ ಜಿಎನ್. ವೆಂಕಟಾಚಲಪತಿ ಮೂಲಕ ಕಂಡಕ್ಟರ್ ಬಳಿ 2 ಲಕ್ಷ ರೂ. ನೀಡುವಂತೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಿವೃತ್ತಿ ಘೋಷಣೆ ಮಾಡಲು ಇಷ್ಟು ದೊಡ್ಡ ಮೊತ್ತ ಕೇಳಿದ್ದು ಮುಂಗಡವಾಗಿ 1 ಲಕ್ಷ ರೂ. ಸ್ವೀಕರಿಸಿದ್ದ ಚಂದ್ರಶೇಖರ್ 50 ರೂ. ನೀಡುವಂತೆ ಪಟ್ಟು ಹಿಡಿದಿದ್ದರು.
40 ಸಾವಿರ ರೂ. ಲಂಚ ಪಡೆಯುವ ವೇಳೆ ವೆಂಕಟಾಚಲಪತಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಕೋಲಾರ ಎಸಿಬಿ ಡಿವೈಎಸ್ಪಿ ವಿರೇಂದ್ರಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಇದರಲ್ಲಿ ಇನ್ನಷ್ಟು ಓದಿ :