ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರ ಸ್ವಕ್ಷೇತ್ರದಲ್ಲಿಯೇ ಲಂಚಬಾಕ ಅಧಿಕಾರಿಯೊಬ್ಬ ಎಸಿಬಿ ಬಲೆಗೆ ಬಿದ್ದಿದ್ದಾನೆ. ಐವತ್ತು ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಗ್ರಾಮ ಪಂಚಾಯ್ತಿ ಪಿಡಿಓ ಎಸಿಬಿ ಬಲೆಗೆ ಬಿದ್ದಿದ್ದಾರೆ. ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಅತ್ತಿಗೇರಿ ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಈ ಘಟನೆ ನಡೆದಿದ್ದು, ಶಿವಾನಂದ ಹಡಪದ ಎಸಿಬಿ ಬಲೆಗೆ ಬಿದ್ದವರು. ಗುತ್ತಿಗೆದಾರ ಮಹೇಶ ಸಾಲಮನಿ ಎಂಬುವರಿಂದ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಬಲೆಗೆ ಸಿಕ್ಕಿದ್ದಾರೆ. ಶಿವಾನಂದ