ಬಳ್ಳಾರಿ: ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಹೊಸಪೇಟೆ ತಾಲೂಕಿನ ಪಿ.ಕೆ.ಹಳ್ಳಿಯಲ್ಲಿ ನಡೆದಿದೆ. ಕಾರು ಚಾಲಕ ಶ್ರೀನಿವಾಸ್(45), ವೆಂಕಟಮ್ಮ(46), ನಳಿನಿ(30) ಸೇರಿದಂತೆ ಮತ್ತೊಬ್ಬ ಮಹಿಳೆ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಚಿತ್ರದುರ್ಗದ ಹಿರಿಯೂರಿನಿಂದ ಹೊಸಪೇಟೆಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಸಂಬಂಧಿಕರೊಬ್ಬರ ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.ಘಟನೆಯಲ್ಲಿ ಗಾಯಗೊಂಡ ಐವರನ್ನು ಹೊಸಪೇಟೆ ಆಸ್ಪತ್ರೆ ಹಾಗೂ ತೀವ್ರವಾಗಿ ಗಾಯಗೊಂಡ ಮೂವರನ್ನು ಕೊಪ್ಪಳದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.