ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಗ್ರಾಮವೊಂದರಲ್ಲಿ 9ನೇ ತರಗತಿಯಲ್ಲಿ ಓದುತ್ತಿದ್ದ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ನಂತರ ಕೊಲೆ ಮಾಡಲಾಗಿತ್ತು. ಈ ಪ್ರಕರಣವನ್ನು ಆಳಂದ ಪೊಲೀಸರು 24 ಗಂಟೆಗಳಲ್ಲಿ ಭೇದಿಸಿದ್ದಾರೆ. ನವೆಂಬರ್ 1ರಂದು ಮಧ್ಯಾಹ್ನ ಬಾಲಕಿಯ ಕೊಲೆ ನಡೆದಿತ್ತು. ಈ ಪ್ರಕರಣವನ್ನು ಭೇದಿಸಲು ಕಲಬುರಗಿ SP ಇಶಾ ಪಂತ್ ವಿಶೇಷ ತಂಡವನ್ನು ರಚಿಸಿದ್ದರು. ಈ ವಿಶೇಷ ತಂಡ ಕೆಲ ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ