ಗಾಂಧಿನಗರ : ಮಾತನಾಡಲು ನಿರಾಕರಿಸಿದ 25 ವರ್ಷದ ಯುವತಿಗೆ ಆ್ಯಸಿಡ್ ದಾಳಿ ನಡೆಸುವುದಾಗಿ ವ್ಯಕ್ತಿಯೋರ್ವ ಬೆದರಿಕೆ ಹಾಕಿರುವ ಘಟನೆ ಅಹಮದಬಾದ್ನಲ್ಲಿ ನಡೆದಿದೆ.ಇದೀಗ ಯುವತಿ ಆ್ಯಸಿಡ್ ದಾಳಿ ಬೆದರಿಕೆಯೊಡ್ಡಿದ್ದ ಆರೋಪಿ ವಿರುದ್ಧ ವೆಜಾಲ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಅಹಮದಾಬಾದ್ನ ಜುಹಾಪುರದ ನಿವಾಸಿಯಾಗಿರುವ ಸಂತ್ರಸ್ತೆ, ವೆಜಲ್ಪುರದಲ್ಲಿ ವಾಸಿಸುವ ಮನ್ಸೂರಿ ಇಬ್ಬರೂ ಸುಮಾರು ಏಳು ವರ್ಷಗಳಿಂದ ಸ್ನೇಹಿತರಾಗಿದ್ದರು. ಆದರೆ ಇದೀಗ ಯುವತಿ ಆತನೊಂದಿಗೆ ಮಾತನಾಡುವುದನ್ನು ನಿಲ್ಲಿಸಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ಆಗ ಯುವತಿ ನಿನ್ನೊಂದಿಗೆ ಸ್ನೇಹ ಬೆಳೆಸಲು