ನನ್ನ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು...ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರದ ಅಧಿಕಾರಗಳಿಗೆ ಚಹಾ ಕೂಟ ಏರ್ಪಡಿಸಿ ಅನೌಪಚಾರಿಕವಾಗಿ ಮಾತನಾಡಿ, ನಾವು ಸಂವಿಧಾನ ಒಪ್ಪಿಕೊಂಡಿದ್ದೇವೆ..ಆಡಳಿತದಲ್ಲಿ ಕಾರ್ಯಾಂಗ, ಶಾಸಕಾಂಗ ಎರಡೂ ಪ್ರಮುಖ ಪಾತ್ರ ವಹಿಸುತ್ತವೆ. ನಾವು ಅದರ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇವೆ. ನಾನು ಅಧಿಕಾರಕ್ಕೆ ಬಂದಾಗ ಕೋವಿಡ್, ಪ್ರವಾಹ ಸಂದರ್ಭ ಎದುರಾಯಿತು. ಎಲ್ಲವನ್ನೂ ಯಶಸ್ವಿಯಾಗಿ ನಿಭಾಯಿಸಿದ್ದೇವೆ.