ಕೊಡಗು ಜಿಲ್ಲೆಯಲ್ಲಿ ಅಕ್ರಮ ಹೋಂ ಸ್ಟೇಗಳ ವಿರುದ್ಧ ಉಗ್ರ ಕ್ರಮ ಕೈಗೊಳ್ಳುವುದಾಗಿ ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ತಿಳಿಸಿದ್ದಾರೆ.ಹೋಂ ಸ್ಟೇಗಳ ನೋಂದಾವಣೆಗೆ ಅವರು ಈ ಮೊದಲು ಆಗಸ್ಟ್ 2ರ ಗಡುವು ನೀಡಿದ್ದರು. ಆದರೆ ಬಹುತೇಕ ಹೋಂ ಸ್ಟೇಗಳು ಸಚಿವರು ನೀಡಿರುವ ಗಡುವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಹಾಗಾಗಿ ಈ ಹೋಂ ಸ್ಟೇಗಳ ವಿರುದ್ಧ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆಗಳ ಮೂಲಕ ಜಂಟಿ ಕಾರ್ಯಾಚರಣೆ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.