ಕರಾವಳಿಯಲ್ಲಿ ಭಯೋತ್ಪಾದಕರನ್ನು ಸೃಷ್ಟಿಸುತ್ತಿರುವ ಎರಡು ಕೈಗಾರಿಕೆಗಳನ್ನು ಮುಚ್ಚಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡುತ್ತಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಘ ಪರಿವಾರದ ಸಂಘಟನೆಗಳು ಮತ್ತು ಪಿಎಫ್ಐ, ಎಸ್ಡಿಪಿಐ ಕರಾವಳಿಯಲ್ಲಿ ಭಯೋತ್ಪಾದಕರನ್ನು ಸೃಷ್ಟಿಸುತ್ತಿವೆ. ಈ ಎರಡೂ ಕೈಗಾರಿಕೆಗಳನ್ನು ಮುಚ್ಚಿಸಲಾಗುವುದು ಎಂದಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಕಿತ್ತಿಕೊಳ್ಳುವ ಸಲುವಾಗಿ ಬಿಜೆಪಿಯವರೇ ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆಗಳನ್ನು ಬೆಳೆಸಿದ್ದಾರೆ ಎಂದು ತಿಳಿಸಿದ್ದಾರೆ. ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್