ರಾಜ್ಯದ ಎಲ್ಲಾ ಜಲಾಶಯಗಳ ನೀರಿನ ಮಟ್ಟ ಮತ್ತು ಹೂಳು ಪರಿಶೀಲನೆಗೆ ಡ್ರೋಣ್ ಬಳಸಿ ಸರ್ವೆ ಕಾರ್ಯ ನಡೆಸಲಾಗುತ್ತಿದೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ವೀಣಾ ಅಚ್ಚಯ್ಯ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಕೊಡಗು ಜಿಲ್ಲೆ ಮಾತ್ರವಲ್ಲದೇ ರಾಜ್ಯದ ಎಲ್ಲಾ ಜಲಾಶಯಗಳ ನೀರಿನ ಪರಿಶೀಲನೆ ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ವರದಿ ಬರಲಿದೆ ಎಂದು ಅವರು ತಿಳಿಸಿದರು. ನದಿ ಪಾತ್ರದಲ್ಲಿ ತುಂಬಿರುವ ಹೂಳಿನ