ನಗರದ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜಿನಲ್ಲಿ ಸೈನಿಕರ ವಿರುದ್ಧ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಘೋಷಣೆ ಕೂಗಿದ್ದು ಸಾಬೀತಾದರೆ ಕಠಿಣ ಕ್ರಮ ನಿಶ್ಚಿತ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನ್ನಾಡುತ್ತಿದ್ದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರೇತರ ಸಂಸ್ಥೆ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆಯ ಸದಸ್ಯರ ವಿರುದ್ಧ ಪ್ರಥಮ ಮಾಹಿತಿ ವರದಿ(ಎಫ್ಐಆರ್) ದಾಖಲಾಗಿದೆ. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ದೇಶದ್ರೋಹಿ ಘೋಷಣೆ ಕೂಗಿದ್ದು ಸತ್ಯವೆಂದು ಸಾಬೀತಾದರೆ ಅವರನ್ನು ರಕ್ಷಿಸುವುದಿಲ್ಲ.