ಕನ್ನಡ ಜನಪ್ರಿಯ ಧಾರಾವಾಹಿ ‘ಜೊತೆ ಜೊತೆಯಲಿ’ ಸೀರಿಯಲ್ನ ನಾಯಕ ನಟ ಅನಿರುದ್ಧ್ ಅವರ ಮೇಲೆ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ 2 ವರ್ಷಗಳ ಕಾಲ ನಿಷೇಧ ಹೇರಿದೆ. ಈ ಮೂಲಕ ಕಿರುತೆರೆಯ ಯಾವುದೇ ಕಾರ್ಯಕ್ರಮಗಳಲ್ಲಿ ಅನಿರುದ್ಧ್ಗೆ ಅವಕಾಶ ಕೊಡದಂತೆ ನಿರ್ಧರಿಸಲಾಗಿದೆ ಎಂದು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ತಿಳಿಸಿದ್ದಾರೆ. ನಟ ಅನಿರುದ್ಧ್ ಅವರ ಜೊತೆ ತಂತ್ರಜ್ಞರ ತಂಡ ಮುನಿಸಿಕೊಂಡಿದ್ದು, ಹೀಗಾಗಿ ಅವರನ್ನು ಸೀರಿಯಲ್ನಿಂದ ಕೈ ಬಿಡಲು ನಿರ್ಧರಿಸಲಾಗಿದೆ. ನಾವು