ಬೆಂಗಳೂರು: ಬಿಸಿಯೂಟ ಕಾರ್ಯಕರ್ತರ ಕೂಗು ಸರ್ಕಾರಕ್ಕೆ ಕೇಳಿಸುತ್ತಿಲ್ಲವೇ ಎಂದು ಸ್ಯಾಂಡಲ್ ವುಡ್ ನಟ, ಸಾಮಾಜಿಕ ಹೋರಾಟಗಾರ ಚೇತನ್ ವಾಗ್ದಾಳಿ ನಡೆಸಿದ್ದಾರೆ. ಬಿಸಿಯೂಟ ಕಾರ್ಯಕರ್ತೆಯರು ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದ ನಾಲ್ಕು ದಿನಗಳಿಂದ ಫ್ರೀಡಂ ಪಾರ್ಕ್ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾರ್ಯಕರ್ತೆಯರ ಜತೆಗಿನ ಸರ್ಕಾರದ ಸಂಧಾನ ಸಭೆಯೂ ವಿಫಲವಾಗಿದೆ.ಈ ಹಿನ್ನಲೆಯಲ್ಲಿ ನಟ ಚೇತನ್ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ. ಕಾರ್ಯಕರ್ತೆಯರ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಚೇತನ್, ಸದ್ದಿಲ್ಲದೇ