ಬೆಂಗಳೂರು : ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಸಿನಿಮಾ ತಾರೆಯರು ಕೂಡ ರಾಜಕೀಯ ಕಣಕ್ಕಿಳಿಯುತ್ತಿದ್ದು, ಇದೀಗ ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ, ನಟ ಎಸ್. ಮಹೇಂದರ್ ಅವರು ಕಾಂಗ್ರೆಸ್ ತೊರೆದು ಅಧಿಕೃತವಾಗಿ ಜೆಡಿಎಸ್ ಗೆ ಸೇರ್ಪಡೆಯಾಗಿದ್ದಾರೆ. ಬುಧವಾರ ನಗರದ ಪಕ್ಷದ ಕಚೇರಿ ಜೆಪಿಭವನದಲ್ಲಿ ಜೆಡಿಎಸ್ ಪಕ್ಷದ ಬಾವುಟ ನೀಡುವುದರ ಮೂಲಕ ಸ್ವಾಗತಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸಿನಿಮಾ ವಿತರಕರಾಗಿದ್ದ ಸಮಯದಿಂದಲೂ ಮಹೇಂದರ್ ಪರಿಚಯ ಇದೆ. ಅವರ