ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅಭಿಮಾನಿಗಳು ತಮ್ಮ ಮೆಚ್ಚಿನ ನಟ ಅಗಲಿಕೆಯ ನೋವಿನಲ್ಲಿಯೂ ಪಟಾಕಿ ಹೊಡೆದಿದ್ದಾರೆ. ನಟನ ಸಾವಿನ ಕೇಸ್ ತನಿಖೆಯನ್ನು ಸಿಬಿಐಗೆ ವಹಿಸಿ ಸುಪ್ರೀಂಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಬಿಹಾರದಲ್ಲಿ ನಟನ ಅಭಿಮಾನಿಗಳು ಪಟಾಕಿ ಸಿಡಿಸಿದ್ದಾರೆ. ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ನ್ಯಾಯ ಸಿಗಬೇಕೆಂದು ಅಭಿಮಾನಿಗಳು ಆಗ್ರಹ ಮಾಡಿದ್ದಾರೆ.