ಬೆಂಗಳೂರು : ಚುನಾವಣಾ ಹಿನ್ನಲೆಯಲ್ಲಿ ಸ್ಯಾಂಡಲ್ ವುಡ್ ನಟ ಲೂಸ್ ಮಾದ ಖ್ಯಾತಿಯ ಯೋಗೇಶ್ ಅವರು ಪ್ರಚಾರ ಕಾರ್ಯಕ್ಕೆ ಇಳಿದಿದ್ದು, ಕಾಂಗ್ರೆಸ್ ಗೆ ಮತ ಹಾಕುವಂತೆ ಜನರಲ್ಲಿ ಮನವಿ ಮಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಆರ್.ಕೆ.ರಮೇಶ್ ಪರವಾಗಿ ಪರಪ್ಪನ ಅಗ್ರಹಾರದಲ್ಲಿ ರೋಡ್ ಶೋನಲ್ಲಿ ಭಾಗವಹಿಸಿದ ನಟ ಯೋಗೇಶ್ ಅವರು ಮಾಧ್ಯಮದವರೊಂದಿಗೆ ಮಾತನಾಡಿ ಬಿಜೆಪಿ ಸರ್ಕಾರದವರು ಯಾವತ್ತೂ ಅಚ್ಛೇ ದಿನ್ ಅಚ್ಛೇ ದಿನ್ ಅಂತ ಹೇಳುತ್ತಾನೇ ಇದ್ದಾರೆ. ಅಚ್ಛೇ ದಿನ್ ಯಾರಿಗೂ ಬಂದಿಲ್ಲ.