ನಟಿ ಹಾಗೂ ಸಮಾಜಸೇವಕಿ ಡಾ. ಪೂಜಾ ರಮೇಶ್ರವರು ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಯಾಗಿದ್ದಾರೆ.ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಪ್ರಚಾರ ಹಾಗೂ ಜನಸಂಪರ್ಕ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹಾಗೂ ಪಕ್ಷದ ರಾಜ್ಯ ಕಾರ್ಯದರ್ಶಿ ಕುಶಲಸ್ವಾಮಿಯವರು ಪೂಜಾರವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಪೃಥ್ವಿ ರೆಡ್ಡಿ, ಆಮ್ ಆದ್ಮಿ ಪಾರ್ಟಿಯು ಜನಾನುರಾಗಿ ಹಾಗೂ ಪ್ರಾಮಾಣಿಕ ಮನಸ್ಸುಗಳನ್ನು ಆಕರ್ಷಿಸುವುದರಲ್ಲಿ ಯಶಸ್ವಿಯಾಗುತ್ತಿದೆ.