ಬೆಂಗಳೂರು: ಬಿಬಿಎಂಪಿಯ ಕೆಲವು ಅಧಿಕಾರಿಗಳು ಬೆಡ್ ಬ್ಲಾಕಿಂಗ್ ದಂಧೆ ನಡೆಸುತ್ತಿದ್ದಾರೆ ಎಂಬ ಸಂಸದ ತೇಜಸ್ವಿ ಸೂರ್ಯ ಆರೋಪದ ಬಗ್ಗೆ ನಟಿ, ಬಿಜೆಪಿ ನಾಯಕಿ ತಾರಾ ಪ್ರತಿಕ್ರಿಯಿಸಿದ್ದಾರೆ.ಸಾಮಾಜಿಕ ಜಾಲತಾಣದಲ್ಲಿ ತಾರಾ ಈ ಬಗ್ಗೆ ಧ್ವನಿ ಎತ್ತಿದ್ದಾರೆ. ಇದೊಂದು ನಾಚಿಕೆಗೇಡಿನ ವಿಚಾರ, ತಪ್ಪಿತಸ್ಥರ ವಿರುದ್ಧ ಕ್ರಮವಾಗಲಿ ಎಂದು ಅವರು ಆಗ್ರಹಿಸಿದ್ದಾರೆ.‘ಈ ದಂಧೆಯಲ್ಲಿ ತೊಡಗಿದವರ ವಿರುದ್ಧ ನಿರ್ಲಕ್ಷ, ಭ್ರಷ್ಟಾಚಾರ ಪ್ರಕರಣವಲ್ಲ, ಜನರನ್ನು ಕೊಲೆ ಮಾಡಿದ ಪ್ರಕರಣ ದಾಖಲಿಸಬೇಕು. ಇಂತಹ ಒಂದು ದಂಧೆ ನಡೆದಿರುವುದು ನಿಜಕ್ಕೂ