ಬೆಂಗಳೂರು, ಸೆ.18 : ಅಕ್ಟೋಬರ್ ತಿಂಗಳಿನಲ್ಲಿ ದಸರಾ ಸೇರಿದಂತೆ ಸಾಲು ಸಾಲು ಸರ್ಕಾರಿ ರಜೆಗಳು ಇರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆಯು ಹೆಚ್ಚಾಗುವ ಸಾಧ್ಯತೆ ಇದ್ದು , ಹೆಚ್ಚುವರಿ ಬಸ್ಗಳನ್ನು ಒದಗಿಸಲು ಕೆಎಸ್ಆರ್ಟಿಸಿ ಸಿದ್ಧತೆ ನಡೆಸಿದೆ. ಗಾಂಧಿ ಜಯಂತಿ, ಮಹಾಲಯ ಅಮಾವಾಸ್ಯೆ, ದಸರಾ, ಈದ್-ಮಿಲಾದ್, ಮಹರ್ಷಿ ವಾಲ್ಮೀಕಿ ಜಯಂತಿ ಸಾಲು ಸಾಲು ರಜೆಗಳು ಇದ್ದು , ಈ ಅವಧಿಯಲ್ಲಿ ಹೆಚ್ಚುವರಿ ಬಸ್ಗಳನ್ನು ಪ್ರಯಾಣಿಕರಿಗೆ ಒದಗಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ