ಮಂಗಳೂರಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್ ಮತ್ತೆ ಮಂಗಳೂರಿಗೆ ಬಂದಿದ್ದಾನೆ. ಆದರೆ ಈ ಬಾರಿ ಆದಿತ್ಯ ರಾವ್ ನನ್ನು ಮಂಗಳೂರು ಪೊಲೀಸರು ಕರೆದುಕೊಂಡು ಬಂದಿದ್ದಾರೆ. ಪೊಲೀಸರಿಗೆ ಶರಣಾಗಿದ್ದ ಬಾಂಬರ್ ಆದಿತ್ಯ ರಾವ್ ನನ್ನು ವೈದ್ಯಕೀಯ ಪರೀಕ್ಷೆ, ಚಿಕಿತ್ಸೆ ಹಾಗೂ ತನಿಖೆ ನಡೆಸಿದ ಬಳಿಕ ಮಂಗಳೂರು ಪೊಲೀಸರಿಗೆ ಹಸ್ತಾಂತರಿಸಲಾಗಿದೆ. ನಾಳೆ ಸಂಜೆಯೊಳಗೆ ಬಾಂಬರ್ ಆದಿತ್ಯ ರಾವ್ ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.