ಕಲಬುರಗಿ(ಜು.15): ವ್ಯಕ್ತಿಯನ್ನು ಅಪಹರಿಸಿ, ಹತ್ಯೆಗೈದು ಶವವನ್ನು ರೈಲ್ವೆ ಹಳಿ ಮೇಲೆ ಬಿಸಾಡಿ ಹೋಗಿದ್ದ ಘಟನೆ ಜಿಲ್ಲೆಯ ಶಹಬಾದ್ ತಾಲೂಕಿನ ಮರ್ತೂರು ಬಳಿ ನಡೆದಿದೆ. ಚೆನ್ನಬಸಪ್ಪ ನಾಯ್ಕೋಡಿ(35) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. * ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆ * ಹಣದ ವಿಚಾರವಾಗಿ ಸ್ನೇಹಿತರೇ ಕೊಲೆ ಮಾಡಿರುವ ಶಂಕೆ * ಇಬ್ಬರು ಆರೋಪಿಗಳನ್ನ ಬಂಧಿಸಿದ ಪೊಲೀಸರು ಮೃತ ಚೆನ್ನಬಸಪ್ಪ ಜೇವರ್ಗಿ ತಾಲೂಕಿನ ಬಿಲ್ಲಾಡ್ ಗ್ರಾಮದ ನಿವಾಸಿಯಾಗಿದ್ದು, ಕಳೆದ ಶನಿವಾರ ಗ್ರಾಮದಿಂದ ನಾಪತ್ತೆಯಾಗಿದ್ದನು.