ಬೆಂಗಳೂರು(ಆ.04): ಶಿಕ್ಷಣ, ಉದ್ಯೋಗ ಇನ್ನಿತರ ಕಾರಣ ಕೊಟ್ಟು ಬೆಂಗಳೂರಿಗೆ ಬರುವ ವಿದೇಶಿಗರು ಡ್ರಗ್ಸ್ ಪ್ರಕರಣದಲ್ಲಿ ಭಾಗಿಯಾಗುವ ಪ್ರಮಾಣ ಕಳೆದ ಎರಡೂವರೆ ವರ್ಷಗಳಲ್ಲಿ ಮೂರು ಪಟ್ಟು ಹೆಚ್ಚಾಗಿದ್ದು, ಡ್ರಗ್ಸ್ ದಂಧೆಯಲ್ಲಿ ಆಫ್ರಿಕಾ ಪ್ರಜೆಗಳೇ ಹೆಚ್ಚಿರುವುದು ಕಂಡುಬಂದಿದೆ. ಎರಡು ವರ್ಷದಲ್ಲಿ 200ಕ್ಕೂ ಹೆಚ್ಚು ಮಂದಿ ವಿದೇಶಿಗರನ್ನು ಬೆಂಗಳೂರು ಪೊಲೀಸರು ಡ್ರಗ್ಸ್ ದಂಧೆ ಪ್ರಕರಣದಲ್ಲಿ ಬಂಧಿಸಿ, ಜೈಲಿಗಟ್ಟಿದ್ದಾರೆ. ಡ್ರಗ್ಸ್ ದಂಧೆಯಲ್ಲಿ ಜೈಲು ಸೇರಿರುವ ವಿದೇಶಿಗರ ಪೈಕಿ ಶೇ.95ಕ್ಕೂ ಹೆಚ್ಚು ಮಂದಿ ಆಫ್ರಿಕಾ ಪ್ರಜೆಗಳೇ ಇದ್ದಾರೆ.