ಸಂತೋಷ್ ಅವರ ಆತ್ಮಹತ್ಯೆ ಪ್ರಕರಣ ಸಂಪೂರ್ಣವಾಗಿ ತನಿಖೆಯಾಗಲಿದ್ದು, ಸತ್ಯ ಹೊರಬರಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಆರ್.ಟಿ. ನಗರದ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ತಮ್ಮ ಕಾಲದಲ್ಲಿ ಹಲವಾರು ಕೊಲೆಗಳಾಗಿ, ಆ ಕೊಲೆ ಮಾಡಿದ ಸಂಘಟನೆಗಳ ಮೇಲಿನ ಪ್ರಕರಣಗಳನ್ನು ಹಿಂಪಡೆದು ರಾಜ್ಯದಲ್ಲಿ ಅರಾಜಕತೆ ಇದ್ದದ್ದರಿಂದಲೇ ಜನ ಕಾಂಗ್ರೆಸ್ ನ್ನು ತಿರಸ್ಕರಿಸಿದ್ದಾರೆ. ಅವರಿಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ ಎಂದರು. ಆಧಾರರಹಿತ ಆರೋಪಗಳಿಗೆ ನಾವು ಪ್ರತಿಕ್ರಿಯೆ