ಬೆಂಗಳೂರಿನಲ್ಲಿ ಭಾರತೀಯ ಸೇನೆ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಪ್ರತಿದೂರು ದಾಖಲಾಗಿದೆ. ಘಟನೆಯ ವಿಡಿಯೋ ಸಿಕ್ಕ ಬಳಿಕ ಕ್ರಮ ಕೈಗೊಳ್ಳುತ್ತೇವೆ ಎಂದು ಡಿಜಿ ಹಾಗೂ ಐಜಿಪಿ ಓಂ ಪ್ರಕಾಶ್ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಹೇಳನಕಾರಿ ಘೋಷಣೆ ಕೂಗಿದವರ ಕುರಿತು ಯಾವುದೇ ಸ್ಪಷ್ಟ ದಾಖಲೆಗಳಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸಬೇಕು ತಿಳಿಯುತ್ತಿಲ್ಲ. ಖಚಿತವಾದ ಸಾಕ್ಷಿಗಳು ಲಭ್ಯವಾದ ಮೇಲೆ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು.